ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ


ಕಬ್ಬನ್ ಉದ್ಯಾನವನ, ಬೆಂಗಳೂರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2026
2026ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :25-5-2026. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.
ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು.
ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
ದೃಢೀಕೃತ ಅಂಕಪಟ್ಟಿ
ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆ ಅಧ್ಯಕ್ಷರು / ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ. ( PDF File ಲಭ್ಯವಿದೆ).
ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತJPG formatನಲ್ಲಿ (1mbಮೀರದಂತೆ) ಅಪ್ಲೋಡ್ ಮಾಡುವುದು.·ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್ಗೆ ಸ್ವೀಕೃತಿ ರವಾನೆಯಾಗಲಿದೆ.·ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.